- Advertisement -
- Advertisement -





ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವು ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿಯಲ್ಲಿ ಮಂಜು ಹಿಡಿದಿರುವ ಕಾರಣ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಈ ಘಟನೆಯಲ್ಲಿ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಧಾವಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
- Advertisement -








