Tuesday, June 9, 2026
spot_imgspot_img
spot_imgspot_img

ವಿಮಾನ ಪತನ; ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಮೃತ್ಯು..!

- Advertisement -
- Advertisement -

ಅಹಮದಾಬಾದ್‌: ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಲಂಡನ್‌ಗೆ ಪ್ರಯಾಣಿಸುತ್ತಿದ್ದ ವಿಜಯ್‌ ರೂಪಾನಿ 12ನೇ ಸೀಟಿನಲ್ಲಿ ಕುಳಿತುಕೊಂಡಿದ್ದರು. ಲಂಡನ್‌ನಲ್ಲಿರುವ ಮಗಳ ಮನೆಗೆ ತೆರಳಲು ರೂಪಾನಿ ವಿಮಾನ ಹತ್ತಿದ್ದರು.

ಇಬ್ಬರು ಪೈಲಟ್‌, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈಗಾಗಲೇ 130ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏರಿಕೆ ಆಗುತ್ತಿದೆ.

ಆಸ್ಪತ್ರೆಗೆ ಸೇರಿದ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ. ವಿಮಾನ ಮೆಡಿಕಲ್‌ ಕಾಲೇಜಿನ ಹಾಸ್ಟೆಲಿನ ಅಡುಗೆ ಮನೆ ಮೇಲೆ ಬಿದ್ದಿದೆ. ಮಧ್ಯಾಹ್ನ ವಿದ್ಯಾರ್ಥಿಗಳು ಊಟ ಮಾಡುವ ಸಮಯದಲ್ಲೇ ಪತನಗೊಂಡಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

- Advertisement -

Related news

error: Content is protected !!