Tuesday, July 21, 2026
spot_imgspot_img
spot_imgspot_img

ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ಪೈಲಟ್ ಸೇರಿ ಮೂವರು ಸಾವು

- Advertisement -
- Advertisement -

ಬ್ರೆಸಿಲಿಯಾ: ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು. ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಸಾವೊ ಪಾಲೊಗೆ ತೆರಳುತ್ತಿದ್ದ ವಿಮಾನ ಪತನಗೊಂಡಿದೆ.

ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ವಿಮಾನ ಕಟ್ಟಡಕ್ಕೆ ಡಿಕ್ಕಿ ಹೊಡೆದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

- Advertisement -

Related news

error: Content is protected !!