Saturday, April 20, 2024
spot_imgspot_img
spot_imgspot_img

ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ವೀಡಿಯೋ ಕಾನ್ಫರೆನ್ಸ್

- Advertisement -G L Acharya panikkar
- Advertisement -

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ಕೊರೊನಾ ಸೋಂಕು ವ್ಯಾಪಕವಾಗಿರುವ 7 ರಾಜ್ಯದ ಮುಖ್ಯಮಂತ್ರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಅವರು ಕರ್ನಾಟಕದ 9 ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡಿರುವ ಕೊರೊನಾವನ್ನ ಆದಷ್ಟು ಬೇಗ ತಡೆಗಟ್ಟುವಂತೆ ಸಿಎಂ ಬಿ.ಎಸ್ ಯಡಿಯೂರಪ್ಪರವರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದ 9 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿದೆ. ಇದನ್ನು ಆದಷ್ಟು ಬೇಗ ತಡೆಗಟ್ಟಬೇಕು. ನೀವು ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಲೇಬೇಕು ಎಂದು ಯಡಿಯೂರಪ್ಪರವರಿಗೆ ಮೋದಿ ಕಾನ್ಫರೆನ್ಸ್ ನಲ್ಲಿ ಸೂಚಿಸಿದರು.

ಪ್ರಧಾನಿ ಮಾತಿಗೆ ಉತ್ತರಿಸಿದ ಬಿಎಸ್ ವೈ ಶ್ರೀಘ್ರದಲ್ಲೇ ಕ್ರಮದ ವಿವರವನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ ಸಿಎಂ, ವ್ಯೆದ್ಯಕೀಯ ಸಚಿವ ಡಾ. ಕೆ ಸುಧಾಕರ್ ಗೆ ಕೊರೊನಾ ಸೋಂಕು ತಡೆಗಟ್ಟಲು ಕ್ರಮದ ಬಗ್ಗೆ ಚರ್ಚೆ ನಡೆಸಿ, ಇಂದು ಸಂಜೆಯೊಳಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.


- Advertisement -

Related news

error: Content is protected !!