Friday, April 19, 2024
spot_imgspot_img
spot_imgspot_img

ಪ್ರಧಾನಿ ನರೇಂದ್ರ ಮೋದಿ ಹೇಳಿದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆಯಿದೆ; ಸಿಎಂ ಯಡಿಯೂರಪ್ಪ

- Advertisement -G L Acharya panikkar
- Advertisement -

ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಸಲಿದ್ದು, ದೇಶಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಸದ್ಯ ಪ್ರಧಾನಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ. ಪ್ರಧಾನಿ ಮೋದಿ ಹೇಳಿದರೆ ರಾಜ್ಯದಲ್ಲೂ ಲಾಕ್ ಡೌನ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 14 ದಿನಗಳ ಜನತಾ ಕರ್ಪ್ಯೂ ವಿಧಿಸಲಾಗಿದೆ. ಆದರೂ ರಾಜ್ಯದಲ್ಲಿ ಪ್ರತಿದಿನ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೇ. 12 ರಿಂದ ಮತ್ತೆ 14 ದಿನ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!