Monday, July 20, 2026
spot_imgspot_img
spot_imgspot_img

51 ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಿಸಿದ ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ 51 ಸಾವಿರಕ್ಕೂ ಹೆಚ್ಚು ಯುವಕರಿಗೆ ವಿವಿಧ ಕೇಂದ್ರ ಸರ್ಕಾರಿ ಇಲಾಖೆಗಳ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದರು.

ರೈಲ್ವೆ, ಬ್ಯಾಂಕಿಂಗ್, ರಕ್ಷಣಾ, ಆರೋಗ್ಯ ಹಾಗೂ ಶಿಕ್ಷಣ ಇಲಾಖೆಗಳ ನೇಮಕಾತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ಇದೇ ವೇಳೆ ತಮ್ಮ ಇತ್ತೀಚಿನ ಐದು ದೇಶಗಳ ವಿದೇಶಿ ಪ್ರವಾಸದ ಮಹತ್ವವನ್ನು ವಿವರಿಸುವ ಮೂಲಕ ರಾಜಕೀಯ ವಿರೋಧಿಗಳಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.“ನಾನು ಕೇವಲ ಐದು ರಾಷ್ಟ್ರಗಳಿಗೆ ಭೇಟಿ ನೀಡಿ ಬಂದಿಲ್ಲ. ಈ ಅವಧಿಯಲ್ಲಿ ಜಾಗತಿಕ ಮಟ್ಟದ ಪ್ರಮುಖ ಕಂಪನಿಗಳ ಮುಖ್ಯಸ್ಥರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದೇನೆ” ಎಂದು ಮೋದಿ ಹೇಳಿದರು.

ಇಂದು ಇಡೀ ಜಗತ್ತು ಭಾರತದ ತಾಂತ್ರಿಕ ಪ್ರಗತಿ ಮತ್ತು ಯುವಶಕ್ತಿಯತ್ತ ಅಪಾರ ವಿಶ್ವಾಸದಿಂದ ನೋಡುತ್ತಿದೆ. ಭಾರತೀಯ ಯುವಕರಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಅವಕಾಶಗಳು ಮತ್ತು ಮಾನ್ಯತೆ ದೊರಕಿಸುವುದೇ ತಮ್ಮ ವಿದೇಶಿ ಪ್ರವಾಸಗಳ ಪ್ರಮುಖ ಉದ್ದೇಶ ಎಂದು ಅವರು ತಿಳಿಸಿದರು. ಭಾರತ ವಿಶ್ವದ ಅತ್ಯಂತ ವಿಶ್ವಾಸಾರ್ಹ ‘ಸಪ್ಲೈ ಚೈನ್’ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ಹೇಳಿದರು. ಜಾಗತಿಕ ಸೆಮಿಕಂಡಕ್ಟರ್ ದಿಗ್ಗಜ ASML ಕಂಪನಿ ಭಾರತದ ಟಾಟಾ ಗ್ರೂಪ್‌ ಜೊತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಇದರಿಂದ ದೇಶದಲ್ಲಿ ಸಾವಿರಾರು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಮೋದಿ ತಿಳಿಸಿದರು.

ಹಡಗು ನಿರ್ಮಾಣ, ಸೂಪರ್‌ಕಂಪ್ಯೂಟಿಂಗ್ ಮತ್ತು ಹಸಿರು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಂಟಿ ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ನೇಮಕಾತಿ ಪತ್ರ ಪಡೆದ ಯುವಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ, “ನೀವು ಇಂದು ದೇಶದ ಅಭಿವೃದ್ಧಿ ಪಯಣದಲ್ಲಿ ಜವಾಬ್ದಾರಿಯುತ ಪಾಲುದಾರರಾಗಿದ್ದೀರಿ” ಎಂದು ಹೇಳಿದರು. ‘ವಿಕಸಿತ ಭಾರತ’ದ ಕನಸನ್ನು ನನಸು ಮಾಡುವಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶುದ್ಧ ಇಂಧನ, ಹಸಿರು ಹೈಡ್ರೋಜನ್ ಹಾಗೂ ಸುಸ್ಥಿರ ಉತ್ಪಾದನಾ ವಲಯಗಳಲ್ಲಿ ಭವಿಷ್ಯದಲ್ಲಿ ಅಪಾರ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

- Advertisement -

Related news

error: Content is protected !!