- Advertisement -
- Advertisement -



ಕಡಬ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನೊಬ್ಬನನ್ನು ಸುಬ್ರಮಣ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ಅಪ್ರಾಪ್ತ ಮಗಳು ಜುಲೈ 7ರಂದು ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದು, ಜುಲೈ 9ರಂದು ಮನೆಗೆ ಮರಳಿದ್ದಳು. ಈ ನಡುವೆ ಜುಲೈ 8ರಂದು ಬಾಲಕಿಯು ಮಧ್ಯಾಹ್ನ ಸ್ನೇಹಿತೆಯ ಮನೆಯಲ್ಲಿದ್ದ ವೇಳೆ, ಮೋಕ್ಷಿತ್ ಎಂಬಾತ ಮನೆ ಸಮೀಪಕ್ಕೆ ಕರೆದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 29/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 65(1), 351(2) ಹಾಗೂ ಪೋಕ್ಸೊ (POCSO) ಕಾಯ್ದೆಯ ಕಲಂ 4ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
- Advertisement -








