Sunday, June 7, 2026
spot_imgspot_img
spot_imgspot_img

ವಿಷಕಾರಿ ಬೀಜ ಸೇವನೆ; 10ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಅಸ್ವಸ್ಥ

- Advertisement -
- Advertisement -
vtv vitla

ಸರ್ಕಾರಿ ಶಾಲೆಯ ಆವರಣದಲ್ಲಿ ಬೆಳೆದ ವಿಷಕಾರಿ ಬೀಜ ಸೇವನೆ ಮಾಡಿದ 10ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗುಂಡೊಳ್ಳಿಯಲ್ಲಿ ನಡೆದಿದೆ.

ಗುಂಡೊಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಂಗಳವಾರ ಶೇಂಗಾ ಬೀಜ ಎಂದು ವಿಷಕಾರಿ ಬೀಜಗಳನ್ನು ವಿದ್ಯಾರ್ಥಿಗಳು ಸೇವನೆ ಮಾಡಿದ ನಂತರ ಮಕ್ಕಳಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಕಾಳಗಿನಕೊಪ್ಪ ಗ್ರಾಮದ ಸರ್ಕಾರಿ ಆಸ್ಪತ್ರೆ ಹಾಗೂ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

1ರಿಂದ 3ನೇ ತರಗತಿ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದರು. ಅವರಿಗೆ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!