- Advertisement -
- Advertisement -
ಬಂಟ್ವಾಳ:-ರಾಜ್ಯದಲ್ಲಿ ಎಸ್ ಎಸ್‍ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ, ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು. ಪರೀಕ್ಷೆಗಳು ಯಶಸ್ವಿಯಾಗಿ ನಡೆಯುವಂತೆ ಪೊಳಲಿ ದೇವಿಗೆ ಹರಕೆ ಹೊತ್ತಿದ್ದು ಅದರಂತೆ ಕ್ಷೇತ್ರಕ್ಕೆ ಆಗಮಿಸಿದ್ದಾಗಿ ಇದೇ ಸಂದರ್ಭ ಸಚಿವರು ಹೇಳಿದರು.
ಖಾಸಗಿ ಶಾಲೆಗಳ ಶಿಕ್ಷಕರು ಸಂಬಳವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದು, ಅವರ ಸಹಕಾರ ನೀಡುವ ಕುರಿತು ಈಗಾಗಲೇ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘಗಳ ಅಧ್ಯಕ್ಷರಲ್ಲಿ ಮಾತುಕತೆ ನಡೆಸಿದ್ದು, ಪರಿಸ್ಥಿತಿ ತಿಳಿಯಾದ ಬಳಿಕ ಶಾಲೆ ಪುನರಾರಂಭದ ಕುರಿತು ಪೋಷಕರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು.
- Advertisement -