ಮಂಗಳೂರು: ವಿದ್ಯಾರ್ಥಿನಿಗೆ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವಿಡಿಯೋ ಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಆರೋಪಿಯನ್ನು ಉಳ್ಳಾಲ ಬಳಿಯ ಮಂಜನಾಡಿ ನಿವಾಸಿ ಮೊಹಮ್ಮದ್ ಶಾಕೀಬ್ ಎಂದು ಗುರುತಿಸಲಾಗಿದೆ
ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಕೃಷ್ಣಾಪುರ ಬಳಿಯ ವಿದ್ಯಾರ್ಥಿನಿಗೆ ಆರೋಪಿಯು ಪದೇಪದೆ ವಾಟ್ಸ್ ಅಪ್ ಮೆಸೇಜ್ ಮಾಡಿ ಎಷ್ಟು ಬೇಕಾದರೂ ದುಡ್ಡು ಕೊಡಬಲ್ಲೆ. ಬರ್ತೀಯಾ ಎಂದು ಕಿರುಕುಳ ನೀಡುತ್ತಿದ್ದ. ಅಲ್ಲದೇ ನಿರಂತರವಾಗಿ ಆಶ್ಲೀಲ ಚಿತ್ರ ಕಳುಹಿಸುತ್ತಿದ್ದ ಎನ್ನಲಾಗಿದೆ.
ಯುವಕನ ದೌರ್ಜನ್ಯದಿಂದ ವಿದ್ಯಾರ್ಥಿನಿ ಮಾನಸಿಕ ಆಘಾತ ಅನುಭವಿಸಿದ್ದಳು.. ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ಸುರತ್ಕಲ್ ಠಾಣೆಗೆ ದೂರು ನೀಡಿದ್ದರು.ಆರೋಪಿಯು ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದು, ಅಲ್ಲಿಂದಲೇ ಕೃತ್ಯ ಎಸಗುತ್ತಿದ್ದ. ಆತನ ಸ್ನೇಹಿತೆಯ ಬಳಿಯಿಂದ ಆತ ವಿದ್ಯಾರ್ಥಿನಿಯ ನಂಬರ್ ಪಡೆದಿದ್ದ ಎಂದು ತಿಳಿದುಬಂದಿದೆ. ಇದೀಗ ಯುವಕನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.