Monday, June 15, 2026
spot_imgspot_img
spot_imgspot_img

ಭದ್ರತಾ ಪಡೆಗಳಿಗೆ ಬೆದರಿಕೆಯೊಡ್ಡಿದ್ದ ಇಬ್ಬರು ಉಗ್ರರನ್ನ ಬಂಧಿಸಿದ ಪೊಲೀಸರು..!

- Advertisement -
- Advertisement -

ಇಂಫಾಲ: ಭದ್ರತಾ ಪಡೆಗಳಿಗೆ ಬೆದರಿಕೆಯೊಡ್ಡಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಬೆದರಿಕೆಯೊಡ್ಡಿದ್ದ ಮಣಿಪುರದ ನಿಷೇಧಿತ ಸಂಘಟನೆ ಕಾಂಗ್ರೆಪಾಕ್ ಕಮ್ಯುನಿಸ್ಟ್ ಪಕ್ಷದ (ಸಿಟಿ ಮೈಟೈ) ಇಬ್ಬರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ವಾಂಗೈಮ್ ರೋಹಿತ್ ಸಿಂಗ್ (18) ಮತ್ತು ತಂಗ್ಟಮ್ ನೊಂಗನ್ ಮೀಟೈ (18) ಎಂದು ಗುರುತಿಸಲಾಗಿದೆ.

ಬಿಷ್ಣುಪುರ ಮತ್ತು ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಭದ್ರತಾ ಪಡೆಗಳು ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಣಿಪುರದ ನಿಷೇಧಿತ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್‌ನ (ಕೆ) ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ. ಆರೋಪಿಗಳು ಹಣ ಸುಲಿಗೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!