Friday, March 21, 2025
spot_imgspot_img
spot_imgspot_img

ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ; 10 ಮಂದಿ ಬಂಧನ, ನಗದು ಸೊತ್ತುಗಳು ಪೊಲೀಸ್‌ ವಶ..!

- Advertisement -
- Advertisement -

ಬಿ.ಸಿ.ರೋಡ್: ಅಕ್ರಮ ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟ‌ರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಿ, ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಲ್ಯಾನ್ಸಿ ರೋಡ್ರಿಗಸ್, ಸಂಶುದ್ದೀನ್, ಜಾಫರ್ ಸಾಧಿಕ್, ಪ್ರವೀಣ್, ಅರವಿಂದ, ಉಮಾಶಂಕರ, ಪ್ರವೀಣ, ಶೋಧನ್, ವಿಜಯ ಕುಮಾರ್, ಮಹಮದ್ ಕಬೀರ ಎಂದು ಗುರುತಿಸಲಾಗಿದೆ.

ಬಂಟ್ವಾಳ ತಾಲೂಕು ಕೊಡಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.

ದಾಳಿಯ ವೇಳೆ ಇಬ್ಬರು ಪರಾರಿಯಾಗಿದ್ದು,ಉಳಿದ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಬಳಿ ಇದ್ದ ನಗದು ರೂ.20500/- ಹಾಗೂ ರೂ.1180/- ಮೌಲ್ಯದ ಜುಗಾರಿ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Related news

error: Content is protected !!