Tuesday, May 7, 2024
spot_imgspot_img
spot_imgspot_img

ಬೆಳ್ತಂಗಡಿ : ಕೋಳಿ ಅಂಕ ಅಡ್ಡಕ್ಕೆ ಪೊಲೀಸ್‌ ದಾಳಿ

- Advertisement -G L Acharya panikkar
- Advertisement -

ಬೆಳ್ತಂಗಡಿ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ಪಟ್ಟೂರು ವಲಸರಿ ಎಂಬಲ್ಲಿ ನಡೆದಿದೆ.

ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಗಳಿ ದಾಳಿ ನಡೆಸಿದ್ದು, ಕೋಳಿ ಅಂಕದಲ್ಲಿ ನಿರತರಾಗಿದ್ದ ಸತೀಶ, ಜಿತೇಂದ್ರ, ಶೀನ ಮುಗೇರ, ಅಣ್ಣು, ಶ್ರೀಧರ, ಮನೋಜ ಕುಮಾರ್‌, ಸತೀಶ್‌, ಸುಧಾಕರ ಎಂಬ ಹೆಸರಿನ 8 ಮಂದಿಯನ್ನು ವಶಕ್ಕೆ ಪಡೆದುಕೊಂಡು ಒಟ್ಟು ನಗದು ರೂಪಾಯಿ 2,350/-, 4 ಹುಂಜ ಕೋಳಿಗಳು ಒಂದು ಓಮಿನಿ ಕಾರು, ಎರಡು ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ: 68/2023 ಕಲಂ: 87 ಕರ್ನಾಟಕ ಪೊಲೀಸ್‌ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!