Monday, June 15, 2026
spot_imgspot_img
spot_imgspot_img

ವಾಹನ ತಪಾಸಣೆ ವೇಳೆ ಲಾರಿ ಹರಿದು ಪೊಲೀಸ್ ಕಾನ್ಸ್‌ಟೇಬಲ್‌ ಸಾವು..!

- Advertisement -
- Advertisement -

ದಾವಣಗೆರೆ: ವಾಹನ ತಪಾಸಣೆ ವೇಳೆ ಪೊಲೀಸ್ ಕಾನ್ಸ್‌ಟೇಬಲ್‌ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿದೆ.

ರಾಮಪ್ಪ ಪೂಜಾರ್(27) ಮೃತ ಡಿಎಆರ್ ಕಾನ್ಸ್‌ಟೇಬಲ್‌.

ಹೆಬ್ಬಾಳು ಟೋಲ್ ಗೇಟ್ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆಗೆ ಲಾರಿಯನ್ನು ತಪಾಸಣೆ ಮಾಡಲು ಹೋದ ರಾಮಪ್ಪ ಪೂಜಾರ್ ಮೇಲೆ ಚಾಲಕ ಲಾರಿ ಹರಿಸಿ ಎಸ್ಕೇಪ್ ಆಗಿದ್ದಾನೆ. ಗಂಭೀರ ಗಾಯಗೊಂಡಿದ್ದ ಕಾನ್ಸ್‌ಟೇಬಲ್‌ ರಾಮಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಳಿಕ ರಾಮಪ್ಪ ಅವರ ಮೃತದೇಹವನ್ನು ಎಸ್‌ಎಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಲಾಯಿತು. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!