- Advertisement -
- Advertisement -
ಮಂಗಳೂರು:- ಮಂಗಳೂರು ಹೊರವಲಯದ ವಾಮಂಜೂರಿನಲ್ಲಿರುವ ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್. ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸ್ ಸಿಬ್ಬಂದಿ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ವೇಳೆ ಆರೋಪಿಯೊಬ್ಬನಿಗೆ ಕೊರೋನಾ ಪಾಸಿಟಿವ್ ಬಂದಿತು. ಆತನ ಸಂಪರ್ಕದಿಂದ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದ ಶಂಕೆ ವ್ಯಕ್ತವಾಗಿದೆ. ಸಿಬ್ಬಂದಿ ಯನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಈಗಾಗಲೇ ಉಳ್ಳಾಲ ಠಾಣೆಯ ಹತ್ತು ಪೊಲೀಸರಿಗೆ ಕೊರೋನಾ ಸೊಂಕು ಪತ್ತೆಯಾಗಿದೆ.
- Advertisement -