- Advertisement -
- Advertisement -





ಬಂಟ್ವಾಳ: ಮಾಣಿ ಗ್ರಾಮದ ನರಸಿಂಹ ಶೆಟ್ಟಿ ಯಾನೆ ಮಾಣಿ ನರಸಿಂಹ ಎಂಬವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ವಿಟ್ಲ ಪೊಲೀಸರು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ನೋಟಿಸ್ ಜಾರಿಗೊಳಿಸಿದ್ದಾರೆ.
ಮಾನ್ಯ ಉಚ್ಚ ನ್ಯಾಯಾಲಯದ ರಿಟ್ ಪಿಟಿಷನ್ ನಂಬರ್ 104096/2026 ರಂತೆ ಗಡಿಪಾರು ಪ್ರಕ್ರಿಯೆಯನ್ನು ವಿಶೇಷ ಕಾರ್ಯನಿವಾಹಕ ದಂಡಾಧಿಕಾರಿ ಮತ್ತು ಪೊಲೀಸ್ ಅಧೀಕ್ಷರು ದ.ಕ ಜಿಲ್ಲೆ ಮಂಗಳೂರು ಹಿಂಪಡೆದಿದ್ದಾರೆ.
ಗಡಿಪಾರು ಪ್ರಕ್ರಿಯೆಯನ್ನು ಮುಂದುವರೆಸಬೇಕಾದಲ್ಲಿ ವಾದಿದಾರರು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು ಎಂದು ನೋಟಿಸ್ನಲ್ಲಿ ತಿಳಿಸಿದ್ದಾರೆ.
ಈ ಪ್ರಕ್ರಿಯೆಯಿಂದ ಹಿಂದೂ ಜಾಗರಣಾ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಮಾಣಿ ಬಿಗ್ ರಿಲೀಫ್ ಪಡೆದಿದ್ದಾರೆ.
- Advertisement -








