Friday, May 3, 2024
spot_imgspot_img
spot_imgspot_img

ಮದ್ಯದ ಅಮಲಿನಲ್ಲಿ ಕುಣಿದು ಕುಪ್ಪಳಿದ ಪೊಲೀಸ್ ಅಧಿಕಾರಿಗಳು..!

- Advertisement -G L Acharya panikkar
- Advertisement -

ಮದ್ಯದ ಅಮಲಿನಲ್ಲಿ ಹಾಡೊಂದಕ್ಕೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ಕೊಳ್ಳೇಗಾಲ ಡಿವೈಎಸ್ಪಿ ನಾಗರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಶಿವರಾಜ್ ಮುದೋಳ್​, ಪಿಎಸ್​ಐ ಚೇತನ್ ಹಾಗು ಪೊಲೀಸ್ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕುಣಿದಿರುವ ವಿಡಿಯೋ ವೈರಲ್ ಆಗಿದೆ.

ಕೊಳ್ಳೇಗಾಲದ ಸಬ್ ಇನ್ಸ್‌ಪೆಕ್ಟರ್ ಅಶೋಕ್ ವರ್ಗಾವಣೆ ಹಿನ್ನಲೆಯಲ್ಲಿ ಖಾಸಗಿ ರೆಸಾರ್ಟ್​ನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಈ ವೇಳೆ ಡ್ರಿಂಕ್ಸ್ ಪಾರ್ಟಿ ಕೂಡ ಆಯೋಜನೆ ಮಾಡಲಾಗಿತ್ತು. ಮದ್ಯದ ನಶೆಯಲ್ಲಿ ಅಧಿಕಾರಿಗಳು ಹಾಡಿಗೆ ಕುಣಿದು ಕುಪ್ಪಳಿಸಿದ್ದು ಇದನ್ನು ಅಲ್ಲಿದ್ದವರು ಚಿತ್ರೀಕರಿಸಿ ವೈರಲ್ ಮಾಡಿದ್ದಾರೆ ಎನ್ನಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಸರ್ಕಾರಿ ನೌಕರರಿಗೆ ಈ ರೀತಿಯ ವರ್ತನೆ ತರವಲ್ಲ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಪೊಲೀಸ್ ಇಲಾಖೆ ನಿಯಮದ ಪ್ರಕಾರ ಶಿಸ್ತು ಪಾಲಿಸದೆ ಅಶಿಸ್ತು ಪ್ರದರ್ಶನವಾಗಿದೆ. ಕರ್ನಾಟಕ ಸೇವಾ ನಡೆತೆ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -

Related news

error: Content is protected !!