Tuesday, July 28, 2026
spot_imgspot_img
spot_imgspot_img

ರೌಡಿ ಶೀಟರ್ ಪವನ್ ಕುಮಾರ್‌ ಹತ್ಯೆ ಪ್ರಕರಣದ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ- ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬೆಂಗಳೂರು : ರೌಡಿಶೀಟರ್ ಪವನ್ ಕುಮಾರ್ ಹತ್ಯೆ ಪ್ರಕರಣದ ಆರೋಪಿ ರಂಜನ್ ಎಂಬಾತನ ಕಾಲಿಗೆ ಗುಂಡು ಹಾರಿಸುವ ಮೂಲಕ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಆತನನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ.

ಬಾಗಲೂರು ಸಮೀಪದ ನಿರ್ಜನ ಪ್ರದೇಶವೊಂದರಲ್ಲಿದ್ದ ರಂಜನ್‌ನನ್ನು ವಶಕ್ಕೆ ಪಡೆಯಲು ಫೆ.28 ಶನಿವಾರ ಬೆಳಗ್ಗೆ ಸಂಪಿಗೆಹಳ್ಳಿ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಮಾರಕಾಸ್ತ್ರ ಬಳಸಿ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ್ದ. ತಕ್ಷಣ ಎಚ್ಚೆತ್ತ ಇನ್‌ಸ್ಪೆಕ್ಟ‌ರ್ ವೆಂಕಟೇಶ್‌, ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಗುಲಿ ನೆಲಕ್ಕೆ ಬಿದ್ದ ಆರೋಪಿ ರಂಜನ್‌ನನ್ನು ಕೂಡಲೇ ವಶಕ್ಕೆ ಪಡೆಯಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿ 25ರಂದು ರಾತ್ರಿ ಥಣಿಸಂದ್ರ ಸಮೀಪದ ಅಮರಜ್ಯೋತಿ ಲೇಔಟ್‌ನಲ್ಲಿ ಪವನ್ ಕುಮಾ‌ರ್(28)ನನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಲಾಗಿತ್ತು. ಹೆಲೈಟ್ ಧರಿಸಿ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಆರು ಮಂದಿ ಆರೋಪಿಗಳು, ಪವನ್ ಕುಮಾರನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು.

- Advertisement -

Related news

error: Content is protected !!