Friday, May 17, 2024
spot_imgspot_img
spot_imgspot_img

ಕರಾವಳಿಯಲ್ಲಿ ಅನುಮಾನಾಸ್ಪದ ಚಟುವಟಿಕೆ ಹೆಚ್ಚಳ; ಗುಪ್ತಚರ ಇಲಾಖೆಯಿಂದ ಹೈ-ಅಲರ್ಟ್

- Advertisement -G L Acharya panikkar
- Advertisement -
driving

ಮಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಹೆಚ್ಚಾಗುತ್ತಲೇ ಇವೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹೀಗಾಗಿ ಕೂಡಲೇ ಎಚ್ಚೆತ್ತ ಕೇಂದ್ರ ಬೇಹುಗಾರಿಕಾ ಸಂಸ್ಥೆಗಳು ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಅನುಮಾನಾಸ್ಪದ ಚಟುವಟಿಕೆಗಳ ಕುರಿತು ಮಾಹಿತಿ ಕಲೆ ಹಾಕುತ್ತಿವೆ. ಅಲ್ಲದೇ ಹೈ-ಅಲರ್ಟ್​​ ಆಗಿರುವಂತೆ ಸೂಚನೆ ನೀಡಲಾಗಿದೆ.

ಇನ್ನು, ಶಂಕಿತರು ಬಸ್​ನಲ್ಲಿ ಸ್ಫೋಟಕ ಸಾಗಾಟ ನಡೆಸುವ ಸಾಧ್ಯತೆ ಇದೆ. ಇದರೊಂದಿಗೆ ಡ್ರಗ್ಸ್ ಸಾಗಾಟದ ಮಾಹಿತಿಯೂ ಲಭ್ಯವಾಗಿದೆ. ಕೆಎಸ್ಆರ್​ಟಿಸಿ ಬಸ್​​ಗಳಲ್ಲಿ ಸಾಗಿಸುವ ಪಾರ್ಸಲ್​ಗಳ ಮೇಲೆ ನಿಗಾ ವಹಿಸಬೇಕು. ಕಾರ್ಗೋ ಸರ್ವೀಸ್​​ಗೆ ಬರುವ ಪಾರ್ಸೆಲ್​ಗಳ ತೀವ್ರ ತಪಾಸಣೆ ನಡೆಸಬೇಕು ಎಂದು ಸಿಬ್ಬಂದಿಗೆ ಎಚ್ಚರಿಕೆ ಕೊಡಲಾಗಿದೆ.

ಬಸ್​ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಲಗೇಜ್ ಪರಿಶೀಲನೆ ಮಾಡಬೇಕು. ಸಾರಿಗೆ ಸಂಸ್ಥೆಯ ಸಿಬ್ಬಂದಿ ಎಚ್ಚರಿಕೆಯಿಂದಿರಬೇಕು ಎಂದು ಹೈ-ಅಲರ್ಟ್​ ಆದೇಶ ಹೊರಡಿಸಲಾಗಿದೆ.

- Advertisement -

Related news

error: Content is protected !!