Wednesday, September 23, 2026
spot_imgspot_img
spot_imgspot_img

ಬೆಳ್ತಂಗಡಿ : ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್‌ ದಾಳಿ, ಮೂವರು ವಶಕ್ಕೆ

- Advertisement -
- Advertisement -

ಬೆಳ್ತಂಗಡಿ : ಹಣವನ್ನು ಪಣವಾಗಿಟ್ಟು, ಅಕ್ರಮವಾಗಿ ಕೋಳಿ ಅಂಕದ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದ ಕೋಟಿಕಟ್ಟೆ ಅಂಗನವಾಡಿ ಬಳಿ ನಡೆದಿದೆ.

ಬಂಧಿತ ಆರೋಪಿಗಳನ್ನು ಕೆ ಶರತ್, ರಾಜೇಂದ್ರ ಪೂಜಾರಿ ಹಾಗೂ ವಿಠಲ ಶೆಟ್ಟಿ ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಠಾಣಾ ಪಿಎಸೈ ಮುರಳಿಧರ ನಾಯ್ಕ ಕೆ ಜಿ ಅವರ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಗಳ ಸಹಿತ ಕೋಳಿಗಳು, ಕತ್ತಿಗಳು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!