Sunday, July 19, 2026
spot_imgspot_img
spot_imgspot_img

ಮೈಸೂರು: ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಲೋಕಾಯುಕ್ತ –  7 ಕಡೆ ದಾಳಿ

- Advertisement -
- Advertisement -

ಮೈಸೂರು:  ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ್ದಾರೆ. ಇಬ್ಬರು ಭ್ರಷ್ಟರಿಗೆ ಸೇರಿದ ಒಟ್ಟು 7 ಕಡೆಗಳಲ್ಲಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

ಮೈಸೂರು ಮಹಾನಗರ ಪಾಲಿಕೆ ಹಾಗೂ ಟಿ.ನರಸೀಪುರ ಪುರಸಭೆ ಜೆ.ಇ. ಕೆ.ಆರ್.ಚಂದ್ರಶೇಖರ್ ಮನೆ ಹಾಗೂ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ. ಚಂದ್ರಶೇಖರ್‌ಗೆ ಸಂಬಂಧಿಸಿದ ಮೈಸೂರಿನ ವಿಜಯ ನಗರದ ನಿವಾಸ, ಕೆಜಿ ಕೊಪ್ಪಲು ನಿವಾಸ ಹಾಗೂ ಟಿ.ನರಸೀಪುರ ಕಚೇರಿ ಸೇರಿ 4 ಕಡೆ ಏಕಕಾಲದಲ್ಲಿ ದಾಳಿ ನಡೆಸಿ 60 ಲಕ್ಷ ಹಣ ಪತ್ತೆ ಮಾಡಿದ್ದಾರೆ. 

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಇಲಾಖೆ ಡೆಫ್ಯುಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಅಲ್ತಾಫ್ ಹುಸೇನ್ ಜಕಾರ್ತಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಜಕಾರ್ತಿಗೆ ಸೇರಿದ ಎರಡು ನಿವಾಸ ಹಾಗೂ ಕಚೇರಿಯಲ್ಲಿ ಲೊಕಾಯುಕ್ತ ಪೊಲೀಸರ ಶೋಧ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

- Advertisement -

Related news

error: Content is protected !!