Tuesday, April 20, 2021
spot_imgspot_img
spot_imgspot_img

ಪೊಲೀಸ್ ಸಿಬ್ಬಂದಿಗಳಿಗೆ ವಾರದ ರಜೆ ಕಡ್ಡಾಯ: ಪ್ರವೀಣ್ ಸೂದ್

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ರವರು ಎಲ್ಲಾ ಪೊಲೀಸ್ ಕಾರ್ಯಾಲಯಕ್ಕೆ ಸುತ್ತೋಲೆಯನ್ನು ಕಳುಹಿಸಿದ್ದು, ಎಲ್ಲಾ ಪೊಲೀಸ್ ಸಿಬ್ಬಂದಿಗಳು ವಾರದ ರಜೆಯನ್ನು ಕಡ್ಡಾಯವಾಗಿ ತೆಗೆಯಬೇಕು ಎಂದು ಸೂಚಿಸಿದ್ದಾರೆ.

ತುರ್ತು ಪರಿಸ್ಥಿತಿ ಮತ್ತು ಇತರ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಈ ರಜೆ ಕಡ್ಡಾಯವಾಗಿ ಅನ್ವಯವಾಗಲಿದೆ.

ಇತ್ತೀಚೆಗೆ ಕೆಲ ಪೊಲೀಸ್ ಸಿಬ್ಬಂದಿಗಳು ತಮ್ಮ ಮೇಲಾಧಿಕಾರಿಗಳು ತಮಗೆ ವಾರದ ರಜೆಯನ್ನು ತೆಗೆಯಲು ಅವಕಾಶ ನೀಡುತ್ತಿಲ್ಲ ಎಂದು ದೂರು ನೀಡಿದ್ದರು.

ಈ ಕುರಿತ ಗೌಪ್ಯ ಮಾಹಿತಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ರವರಿಗೆ ತಿಳಿದ ಕೂಡಲೇ ಈ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ.

- Advertisement -

MOST POPULAR

HOT NEWS

Related news

error: Content is protected !!