ಬಾಂಗ್ಲಾದೇಶದಲ್ಲಿ ಆಡಳಿತ ವಿರೋಧಿ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಇಂದು ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಿದರು. ಬೆನ್ನಿಗೆ ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿದೆ. ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಇದೀಗ ಶೇಖ್ ಹಸೀನಾ ಅವರ ರಾಜೀನಾಮೆ ಬೆನ್ನಲ್ಲೇ ಮಿಲಿಟರಿ ಆಡಳಿತ ಪ್ರಾರಂಭವಾಗಿದೆ.
ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಕಾರರು ಮನೆಗೆ ನುಗ್ಗಿ ಪ್ರತಿಭಟನೆ ಮಾಡುವ ಮುನ್ನವೇ ಶೇಖ್ ಹಸೀನಾ ರಾಜೀನಾಮೆ ನೀಡಿ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಇನ್ನು ಕೆಲ ಮಾಧ್ಯಮಗಳ ಪ್ರಕಾರ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿತ್ತು. ಇಂದು ಸುಮಾರು 10 ಲಕ್ಷ ವಿದ್ಯಾರ್ಥಿಗಳು ಢಾಕಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿಂಸಾಚಾರದಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಮಂದಿ ಮೃತಪಟ್ಟಿರುತ್ತಾರೆ.
ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರ ನಡುವೆ ಈ ಘರ್ಷಣೆ ನಡೆದಿದೆ. ಇನ್ನು 100 ಮಂದಿ ಸಾವನ್ನಪ್ಪುವ ಜೊತೆಗೆ ನಾರಾರು ಮಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಇಸ್ಕಾನ್ ಮತ್ತು ಕಾಳಿ ದೇವಾಲಯಗಳು ಸೇರಿದಂತೆ ಹಿಂದೂ ದೇವಾಲಯ ಹಾಗೂ ಮನೆಗಳನ್ನು ಗುರಿಯಾಗಿಸಿಕೊಂಡಿದ್ದು, ಇದರಿಂದಾಗಿ ಭಕ್ತರು ಪರದಾಡಬೇಕಾಗಿದೆ.