- Advertisement -
- Advertisement -
ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ಕರಾವಳಿ ಮೂಲದ ಮಾಜಿ ಕೇಂದ್ರ ಸಚಿವರೋರ್ವರಿಗೆ ಮತ್ತು ಅವರ ಪತ್ನಿಗೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿರುವ ಬಗ್ಗೆ ವರದಿಯಾಗಿದೆ. ಆರೋಗ್ಯ ಇಲಾಖೆ ಪ್ರತಿಯೊಬ್ಬರೂ ಕೂಡ ಸ್ವಯಂ ಜಾಗ್ರತೆಯಿಂದ ಇರುವಂತೆ ಹಾಗೂ ಆರೋಗ್ಯ ಇಲಾಖೆ ಸೂಚಿಸಿರುವ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು ಎಂದು ಮತ್ತೊಮ್ಮೆ ಮನವಿ ಮಾಡಿದೆ.
ಮಂಗಳೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರದ ಅಭಿವೃದ್ಧಿಯ ರೂವಾರಿಯೂ ಆಗಿರುವ ಮಾಜಿ ಕೇಂದ್ರ ಸಚಿವರಿಗೆ ಶನಿವಾರ (ಜೂ.4) ಕೋವಿಡ್ ತಪಾಸಣೆ ನಡೆಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕ್ಷೇಮವಾಗಿದ್ದು, ಕೊರೊನಾ ಸಂಬಂಧಿಸಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ದಯವಿಟ್ಟು ಯಾರೂ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಅವರು ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
- Advertisement -