Saturday, April 20, 2024
spot_imgspot_img
spot_imgspot_img

80 ಕೋಟಿ ಬಡ ಜನರಿಗೆ ಮುಂದಿನ 2 ತಿಂಗಳವರೆಗೆ ಕೇಂದ್ರ ಸರ್ಕಾರದಿಂದ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ: ಮುಂದಿನ ಮೇ ಮತ್ತು ಜೂನ್ ತಿಂಗಳಿನಲ್ಲಿ ಕೇಂದ್ರ ಸರಕಾರವು ಸುಮಾರು 80 ಕೋಟಿ ಬಡ ಜನರಿಗೆ ಉಚಿತ ಆಹಾರ ಧಾನ್ಯವನ್ನು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಿಎಂ ಗರಿಬ್ ಕಲ್ಯಾಣ್ ಯೋಜನೆಯ ಪ್ರಕಾರ ಕೇಂದ್ರ ಸರಕಾರವು 5 ಕೆಜಿ ಉಚಿತ ಆಹಾರ ಧಾನ್ಯವನ್ನು ಫಲಾನುಭವಿಗಳಿಗೆ ನೀಡಲಿದ್ದು, ಇದಕ್ಕಾಗಿ 26,000 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ದೇಶದಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಸಮಯದಲ್ಲಿ ಬಡವರಿಗೆ ಪೌಷ್ಠಿಕಾಂಶ ದೊರೆಯುವುದು ಮುಖ್ಯ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಕಳೆದ ವರ್ಷ ಮಾರ್ಚ್‌ನಲ್ಲಿ ಪಿಎಂ ಗರಿಬ್ ಕಲ್ಯಾಣ್ ಅನ್ನ ಯೋಜನೆಯನ್ನು ಸರಕಾರ ಮೊದಲ ಬಾರಿ ಘೋಷಿಸಿದ್ದು, ಈ ಯೋಜನೆ ಅಡಿಯಲ್ಲಿ ಆರಂಭದಲ್ಲಿ ಎಪ್ರಿಲ್ ನಿಂದ ಜೂನ್ ವರೆಗೆ ಬಡವರಿಗೆ ಉಚಿತ ಆಹಾರ ಧಾನ್ಯವನ್ನು ಒದಗಿಸಿತ್ತು.

- Advertisement -

Related news

error: Content is protected !!