- Advertisement -
- Advertisement -



ಬೆಂಗಳೂರು: ಜನಗಣತಿ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ಇದ್ದು, ಜನವರಿಯಿಂದ ಕೇಂದ್ರ ಸರ್ಕಾರದ ಜನಗಣತಿ 2ನೇ ಹಂತ ಪ್ರಾರಂಭವಾಗಲಿದೆ. ಹೀಗಾಗಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆಗೆ ಶಾಲಾ ಶಿಕ್ಷಣ ಇಲಾಖೆಗೆ ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯ ಪತ್ರ ಬರೆದಿದೆ.
ಪರೀಕ್ಷೆ ಮುಂದೂಡುವಂತೆ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದ್ದು, ಕೇಂದ್ರದ ಎರಡನೇ ಸುತ್ತಿನ ಜನಗಣತಿ ಜನವರಿ 25ರಿಂದ ಫೆಬ್ರವರಿ 28ರವರೆಗೆ ನಡೆಯಲಿದೆ. ಮಾರ್ಚ್ 1 ರಿಂದ 5 ವರೆಗೆ ಪರಿಷ್ಕರಣಾ ಸುತ್ತು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ-ಮಾರ್ಚ್ ನಲ್ಲಿ ನಡೆಯಲಿರುವ ಪರೀಕ್ಷೆ ಮುಂದೂಡಿಕೆಗೆ ಮನವಿ ಮಾಡಲಾಗಿದೆ.
ಈಗಾಗಲೇ ಎಸ್‌ಎಸ್‌ಎಲ್‌ಸಿ-ಪಿಯುಸಿ ಪರೀಕ್ಷೆ ತಾತ್ಕಾಲಿಕ ಪಟ್ಟಿಯನ್ನು ಎಕ್ಸಾಂ ಬೋರ್ಡ್ ಬಿಡುಗಡೆ ಮಾಡಿದೆ. ಹೊಸ ವೇಳಾಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
- Advertisement -








