Thursday, July 23, 2026
spot_imgspot_img
spot_imgspot_img

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್- ಸೌದಿ ಅರೇಬಿಯಾದಿಂದ ಊರಿಗೆ ಬಂದಿಳಿದಾಗ ಅರೆಸ್ಟ್..!-ಏನಿದು ಪ್ರಕರಣ?

- Advertisement -
- Advertisement -

ಮಂಗಳೂರು: ಕಳೆದ ಅ. 11ರಂದು ಸಾಮಾಜಿಕ ಜಾಲತಾಣವಾದ ಇನ್ ಸ್ವಾಗ್ರಾಮ್ ನ sdpi_2025 ID ಯಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಈ ಪ್ರಕರಣದಲ್ಲಿ ತಾಂತ್ರಿಕ ವಿಧಾನದ ಮೂಲಕ ತನಿಖೆ ನಡೆಸಿದಾಗ ಇನ್ ಸ್ವಾಗ್ರಾಮ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯನ್ನು ಮಂಗಳೂರು ಮೂಲದ ಉಳಾಯಿಬೆಟ್ಟು ನಿವಾಸಿ ಪ್ರಸ್ತುತ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ಅಬ್ದುಲ್ ಖಾದರ್ ನೇಹಾದ್ (27)ಎಂದು ತಿಳಿದು ಬಂದಿದೆ. ಸದ್ರಿ ಆರೋಪಿಯ ವಿರುದ್ಧ LOC ಹೊರಡಿಸಲಾಗಿದ್ದು, ಡಿ.14ರಂದು ವಿದೇಶದಿಂದ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಪ್ರಯಾಣ ಮಾಡಿದ್ದ ಆರೋಪಿ ಅಬ್ದುಲ್ ಖಾದರ್ ನೇಹಾದ್ ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.

- Advertisement -

Related news

error: Content is protected !!