![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![](https://vtvvitla.com/wp-content/uploads/2022/01/indane-gas-2-1024x748.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
ಬೆಂಗಳೂರು ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತ ಗೊಳಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ. “ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ – 1995ರ ಆದೇಶ ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್ನಲ್ಲಿ ಸುದ್ದಿಗಳು ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು, ಎಂದು ಕರ್ನಾಟಕ ಹೈಕೋರ್ಟ್ ಕಟ್ಟಪ್ಪಣೆ ನೀಡಿವೆ.
ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್ ಹಾಗೂ ರವಿಕಾಂತೇಗೌಡರವರು ಈ ಕುರಿತಂತೆ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್. ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಜೆಚೌಟ ಹಾಗೂ ಡಿ.ಆರ್.ರವಿಶಂಕರ್, ಪ್ರತಿವಾದಿ ರಾಕೇಶ್ ಶೆಟ್ಟಿ ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ವಾಸ್ತವದಲ್ಲಿ ಇವರು ತಮ್ಮ ಚಾನೆಲ್ ಅನ್ನು ಕಾನೂನುಬಾಹಿರವಾಗಿ ನಡೆಸುತ್ತಿದ್ದಾರೆ. 2021ರಿಂದಲೂ ಚಾನೆಲ್ ಪರವಾನಗಿ ನವೀಕರಿಸಿಲ್ಲ ಎಂಬ ಅಂಶಗಳನ್ನು ವಿಸ್ತ್ರತವಾಗಿ ನ್ಯಾಯಪೀಠದ ಗಮನಕ್ಕೆ ತಂದರು.
ಸುದೀರ್ಘ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿ ರಾಕೇಶ್ ಶೆಟ್ಟಿ ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯ್ದೆ 1995 ರ ಅದೇಶವನ್ನು ಉಲ್ಲಂಘಿಸಿರುವ ಕಾರಣ ಪ್ರಕರಣದ ಪ್ರತಿವಾದಿಯಾದ ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರತಿನಿಧಿಯಾಗಿರುವ ಹೆಚ್ಚುವರಿ ನಿರ್ದೇಶಕ ರಾಕೇಶ ಸಂಜೀವ ಶೆಟ್ಟಿ ಅಲಿಯಾಸ್ ರಾಕೇಶ್ ಶೆಟ್ಟಿಗೆ ತಕ್ಷಣದಿಂದಲೇ ತಮ್ಮ ಚಾನಲ್ನಲ್ಲಿ ಸುದ್ದಿಗಳು ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು 22. 8ರವರೆಗೆ ಪ್ರಸಾರ ಮಾಡಬಾರದು ಎಂದು ನಿರ್ದೇಶಿಸಿದ್ದು ವಿಚಾರಣೆ ಮುಂದೂಡಿದೆ.
“ಪವರ್ ಟಿವಿ ಮುಖ್ಯಸ್ಥರು ಮತ್ತು ನಿರೂಪಕರಾದ ರಾಕೇಶ್ ಶೆಟ್ಟಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ ದೇವೇಗೌಡರು, ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಬಗ್ಗೆ ಪವರ್ ಟಿವಿ ನೇರಪ್ರಸಾರ ಕಾರ್ಯಕ್ರಮದಲ್ಲಿ ಅತ್ಯಂತ ಕೀಳು ಮಟ್ಟದಲ್ಲಿ, ಲಘುವಾಗಿ ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ಅವಮಾನ ಮಾಡಿ ಮಾತನಾಡಿದ್ದಾರೆ’
ಈ ಹಿನ್ನೆಲೆಯಲ್ಲಿ ಪವರ್ ಟಿವಿ ಮುಖ್ಯಸ್ಥರಾದ ರಾಕೇಶ್ ಶೆಟ್ಟಿ ಮತ್ತು ಸಂಸ್ಥೆಯ ಸಿಬ್ಬಂದಿಗಳ ಮೇಲೆ ಸೂಕ್ತವಾದ ಕಾನೂನು ಕ್ರಮ ಜರುಗಿಸಿ, ಈ ಕೂಡಲೇ ಜೆಡಿಎಸ್ ಪಕ್ಷದ ನಾಯಕರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ವಿರುದ್ಧ ಅಪಪ್ರಚಾರ ಮಾಡುವ ಕಾರ್ಯಕ್ರಮ ಪ್ರಸಾರ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಜೆಡಿಎಸ್ ಪಕ್ಷದ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಎಸ್ಪಿ ಶ್ರೀರಾಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.