Friday, March 5, 2021

‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’- ದ.ಕ ಜಿಲ್ಲೆಯ ಪುತ್ತೂರಿನ ರಾಕೇಶ್ ಕೃಷ್ಣ ಆಯ್ಕೆ!

ನವದೆಹಲಿ: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವ ಕೇಂದ್ರ ಸರಕಾರ ನೀಡುವ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಕರ್ನಾಟಕ ರಾಜ್ಯದ ಇಬ್ಬರು ಮಕ್ಕಳು ಭಾಜನರಾಗಿದ್ದಾರೆ. ಕೇಂದ್ರ ಸರ್ಕಾರ ನೀಡುವ 2021ನೇ ಸಾಲಿನ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿಗೆ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದಾರೆ.

ನವೋನ್ವೇಷಣೆ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಹಾಗೂ ದೆಹಲಿ ಆರ್ಮಿ ಪಬ್ಲಿಕ್ ಸ್ಕೂಲಿನಲ್ಲಿ ಓದುತ್ತಿರುವ ಬೆಂಗಳೂರಿನ ವೀರ್ ಕಶ್ಯಪ್ ಬಾಲ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಕನ್ನಡಿಗರು.

ಸರ್ಕಾರ ಪ್ರತೀ ವರ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯ ಪದಕವು 1 ಲಕ್ಷ ರೂ ನಗದನ್ನು ಒಳಗೊಂಡಿದೆ. ವಿಜೇತರೊಂದಿಗೆ ಪ್ರಧಾನಿ ಮೋದಿ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ವೀರ್ ಕಶ್ಯಪ್ ರವರು ಕೊರೊನಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಹಾವು-ಏಣಿ ಮಾದರಿಯ ‘ಕೊರೊನಾ ಯುಗ’ ಎಂಬ ವಿಶಿಷ್ಠ ಆಟ ಕಂಡುಹಿಡಿದಿದ್ದರು. ರಾಕೇಶ್ ಕೃಷ್ಣ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ವಿದ್ಯಾರ್ಥಿಯಾಗಿದ್ದಾರೆ. ಸಂಘದ ಸಹಕಾರ, ಶಿಕ್ಷಕರ ಮಾರ್ಗದರ್ಶನ ಪೋಷಕರ ಪ್ರೋತ್ಸಾಹ ತನ್ನ ಈ ಸಾಧನೆಯಲ್ಲಿ ಪ್ರಧಾನ ಪಾತ್ರ ವಹಿಸಿದೆ ಎಂದು ಪ್ರಶಸ್ತಿ ಪುರಸ್ಕೃತ ಪುತ್ತೂರಿನ ರಾಕೇಶ್ ಕೃಷ್ಣ ಹೇಳಿಕೊಂಡಿದ್ದಾರೆ.

- Advertisement -

MOST POPULAR

HOT NEWS

Related news

error: Content is protected !!