



ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ತೀರ್ಪು ಪ್ರಶ್ನಿಸಿ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಾದ-ಪ್ರತಿವಾದ ಆಲಿಸಿದ ಬಳಿಕ ಪ್ರಜ್ವಲ್ ಜಾಮೀನು ಅರ್ಜಿಯನ್ನ ವಜಾಗೊಳಿಸಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಮಂಜೂರು ಮಾಡಲು ಮತ್ತೆ ಹೈಕೋರ್ಟ್ ನಿರಾಕರಿಸಿದ್ದು, ಬೇಲ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಕೆಳಹಂತದ ನ್ಯಾಯಾಲಯ ಆದೇಶ ಅಮಾನತಿನಲ್ಲಿ ಇರಿಸಿ, ಜಾಮೀನು ನೀಡುವಂತೆ ಮನವಿ ಮಾಡಿದ್ದ ಪ್ರಜ್ವಲ್ ರೇವಣ್ಣ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಮಾಜಿ ಸಂಸದನಿಗೆ ಮತ್ತೆ ನಿರಾಸೆಯಾಗಿದೆ.
ಡಿಸೆಂಬರ್ 1ರಂದು ನಡೆದ ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದರು. ಪ್ರಜ್ವಲ್ 2024 ಏಪ್ರಿಲ್ 24ರಂದು ದೇಶ ತೊರೆಯುವಾಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಪ್ರಜ್ವಲ್ ವಿರುದ್ದ ಏಪ್ರಿಲ್ 28ರಂದು ಪ್ರಕರಣ ದಾಖಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಆಸೆ ಹೈಕೋರ್ಟ್ ತಣ್ಣೀರು ಎರಚಿದೆ. ಜಾಮೀನು ಮಂಜೂರು ಮಾಡಲು ಮತ್ತೆ ಹೈಕೋರ್ಟ್ ನಿರಾಕರಿಸಿದ್ದು, ಬೇಲ್ ಅರ್ಜಿಯನ್ನ ವಜಾಗೊಳಿಸಿ ಆದೇಶ ಹೊರಡಿಸಿದೆ. ಕೆಳಹಂತದ ನ್ಯಾಯಾಲಯ ಆದೇಶ ಅಮಾನತಿನಲ್ಲಿ ಇರಿಸಿ, ಜಾಮೀನು ನೀಡುವಂತೆ ಮನವಿ ಮಾಡಿದ್ದ ಪ್ರಜ್ವಲ್ ರೇವಣ್ಣ ಅವರ ಮನವಿಯನ್ನ ಹೈಕೋರ್ಟ್ ತಿರಸ್ಕರಿಸಿದೆ. ಇದ್ರಿಂದ ಮಾಜಿ ಸಂಸದನಿಗೆ ಮತ್ತೆ ನಿರಾಸೆಯಾಗಿದೆ.
ಡಿಸೆಂಬರ್ 1ರಂದು ನಡೆದ ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದರು. ಪ್ರಜ್ವಲ್ 2024 ಏಪ್ರಿಲ್ 24ರಂದು ದೇಶ ತೊರೆಯುವಾಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಪ್ರಜ್ವಲ್ ವಿರುದ್ದ ಏಪ್ರಿಲ್ 28ರಂದು ಪ್ರಕರಣ ದಾಖಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
ನನ್ನ ಕಕ್ಷಿದಾರ ದೇಶ ತೊರೆಯುವುದಿಲ್ಲ ಐಪಿಸಿ ಸೆಕ್ಷನ್ 201ರ ಅಡಿ ಸಾಕ್ಷ್ಯ ನಾಶಪಡಿಸಿರುವುದಕ್ಕೆ ಪ್ರೊ. ರವಿವರ್ಮ ಕುಮಾರ್ ಅವರು ಪ್ರಾಸಿಕ್ಯೂಟ್ ಮಾಡಿದ್ದಾರೆಯೇ ಜಿಯೊ ಮ್ಯಾಪ್ ಅನ್ನು ವಿಚಾರಣಾಧೀನ ನ್ಯಾಯಾಧೀಶರು ಪರಿಗಣಿಸಿದ್ದಾರೆ. ಇದನ್ನು ಹೊರತುಪಡಿಸಿ ಇನ್ನೂ ಮೂರು ಪ್ರಕರಣಗಳು ನನ್ನ ಕ್ಷಕಿದಾರ ವಿರುದ್ಧ ಇವೆ. ಯಾವುದೇ ರೀತಿಯಲ್ಲೂ ನನ್ನ ಕಕ್ಷಿದಾರ ದೇಶ ತೊರೆಯುವುದಿಲ್ಲ ಎಂದು ಪ್ರಜ್ವಲ್ ಪರ ವಕೀಲರು ವಾದಿಸಿದ್ದರು.
ದಾಖಲೆಯಲ್ಲಿದ್ದ ವಸ್ತುಗಳನ್ನು ಆಧರಿಸಿ ವಿಚಾರಣಾಧೀನ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಪ್ರಜ್ವಲ್ ಅವರು ವಿಚಾರಣಾಧೀನ ನ್ಯಾಯಾಲಯದಲ್ಲಿ ಅಶ್ಲೀಲ ವಿಡಿಯೊಗಳ ನಿರ್ಬಂಧಕ್ಕೆ ಆದೇಶ ಪಡೆದಿದ್ದಾರೆ. ಹಾಸನದಲ್ಲಿ ಪ್ರಜ್ವಲ್, ಚುನಾವಣಾ ಏಜೆಂಟ್ ಸಹ ದೂರು ನೀಡಿದ್ದಾರೆ. ಪ್ರಜ್ವಲ್ ಮಾಜಿ ಕಾರು ಡ್ರೈವರ್ ವಿರುದ್ಧವೂ ನ್ಯಾಯಾಲಯದಲ್ಲಿ ದೂರು ನೀಡಿದ್ದಾರೆ. ಆದ್ರೆ, ಈ ಪ್ರಕರಣದ ವಿಚಾರಣೆಯೇ ನಡೆದಿಲ್ಲ. ಇದು ಪ್ರತಿಕಾರವಲ್ಲವೇ ಎಂದು ವಕೀಲ ವಕೀಲ ಲೂಥ್ರಾ ವಾದ ಮಂಡಿಸಿದ್ದರು.
2024ರ ಏಪ್ರಿಲ್ ತಿಂಗಳಲ್ಲಿ ಲೋಕಸಭಾ ಚುನಾವಣೆ ಆರಂಭವಾಗುತ್ತಿದ್ದಂತೆ ಹಾಸನ ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ವೈರಲ್ ಆಗಿದ್ದವು. ಹಲವಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಚಿತ್ರಿಸುವ 2,900 ಕ್ಕೂ ಹೆಚ್ಚು ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.








