Tuesday, July 23, 2024
spot_imgspot_img
spot_imgspot_img

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿರ

- Advertisement -G L Acharya panikkar
- Advertisement -

ವರದಿ: ನ್ಯೂಸ್ ಡೆಸ್ಕ್, ವಿ ಟಿವಿ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸದ್ಯ ಅವರಿಗೆ ಸೇನಾ ಆರ್. ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ನನ್ನ ತಂದೆಯ ಆರೋಗ್ಯ ಸ್ಥಿರವಾಗಿದೆ. ಅವರು ಬೇಗ ಗುಣಮುಖರಾಗಲು ನಿಮ್ಮ ಹಾರೈಕೆ ಮುಂದುವರಿಸಿ ಎಂದು ಕೋರಿದ್ದಾರೆ.

ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಸೋಮವಾರ ಪ್ರಣಬ್ ಮುಖರ್ಜಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನಲೆಯಲ್ಲಿ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಪುತ್ರ ಅಭಿಜಿತ್ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!