Friday, April 26, 2024
spot_imgspot_img
spot_imgspot_img

ಪ್ರಣಬ್‍ರವರ ಸೇವೆ, ಸಾಧನೆಗಳು ಅನನ್ಯ – ಸಿಎಂ ಬಿಎಸ್‍ವೈ ಸಂತಾಪ.

- Advertisement -G L Acharya panikkar
- Advertisement -

ಬೆಂಗಳೂರು: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಎಸ್‍ವೈ ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ.

ಪ್ರಣಬ್‍ರಷ್ಟು ಸುದೀರ್ಘ ಕಾಲ ಆಡಳಿತದ ಕೇಂದ್ರ ಸ್ಥಾನದಲ್ಲಿದ್ದು, ಪ್ರಾಮಾಣಿಕವಾಗಿ, ಕಳಂಕರಹಿತರಾಗಿ ಸೇವೆ ಸಲ್ಲಿಸಿದ ಮತ್ತೋರ್ವ ಸರ್ವಾದರಣೀಯ ನಾಯಕ ಇರಲಾರರು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬಿಎಸ್‍ವೈ ಇನ್ನೊಂದು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!