- Advertisement -
- Advertisement -
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ಸೇನಾ ಆರ್.ಆರ್.ಆಸ್ಪತ್ರೆ ಬುಲೆಟಿನ್ ಹೊರಡಿಸಿದೆ. ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ.

ಅವರ ದೇಹದಲ್ಲಿ ರಕ್ತ ಪರಿಚಲನೆ, ಹೃದಯ ಬಡಿತ ಸಾಧಾರಣ ಸ್ಥಿತಿಯಲ್ಲಿದ್ದು ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿದಿದೆ.

ಸೋಮವಾರ ಕೊರೊನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಬಳಿಕ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಸದ್ಯ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದುಬಂದಿದೆ. ಪ್ರಣಬ್ ಮುಖರ್ಜಿ ಅವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇಶದ ಹಲವಾರು ಗಣ್ಯರು ಹಾರೈಸಿದ್ದಾರೆ.

- Advertisement -