Friday, April 19, 2024
spot_imgspot_img
spot_imgspot_img

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ!

- Advertisement -G L Acharya panikkar
- Advertisement -

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರವರು ರಾಜೀನಾಮೆ ಸಲ್ಲಿಸಿದ್ದಾರೆ. 2018ರ ಡಿಸೆಂಬರ್ 12 ರಿಂದ ಪ್ರತಾಪ್ ಚಂದ್ರ ಶೆಟ್ಟಿ ರವರು ವಿಧಾನ ಪರಿಷತ್ ಸಭಾಪತಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಇದೀಗ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಮಂಡಿಸಿದ ಅವಿಶ್ವಾಸ ನಿರ್ಣಯದ ಹಿನ್ನೆಲೆಯಲ್ಲೀಗ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ಅಧಿವೇಶನದಲ್ಲಿಯೇ ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಆದರೆ ಕಾಂಗ್ರೆಸ್ ಪಕ್ಷ ರಾಜೀನಾಮೆ ನೀಡದಂತೆ ಸೂಚಿಸಿದ ಹಿನ್ನೆಲೆಯಲ್ಲಿ ಪ್ರತಾಪ್ ಚಂದ್ರ ಶೆಟ್ಟಿ ಅವರು ರಾಜೀನಾಮೆಯನ್ನು ನೀಡಿರಲಿಲ್ಲ.

ಇದೀಗ ಈ ಬಾರಿಯ ಅಧಿವೇಶನದಲ್ಲಿಯೂ ಅವಿಶ್ವಾಸ ನಿರ್ಣಯ ಮಂಡನೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸೂಚನೆಯಂತೆ ಸಭಾಪತಿ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

- Advertisement -

Related news

error: Content is protected !!