Monday, April 29, 2024
spot_imgspot_img
spot_imgspot_img

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಇಬ್ಬರು ಪ್ರಮುಖ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ NIA

- Advertisement -G L Acharya panikkar
- Advertisement -

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಸ್ಟರ್‌ಮೈಂಡ್‌ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎನ್‌ಐಎ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ.

ಪ್ರಮುಖ ಆರೋಪಿಗಳಾದ ತುಫೈಲ್ ಎಂ ಎಚ್ ಹಾಗೂ ಮೊಹಮ್ಮದ್ ಜಬೀರ್ ವಿರುದ್ಧ್​ ಚಾರ್ಜ್​ಶೀಟ್ ಸಲ್ಲಿಸಲಾಗಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದಂತಾಗಿದೆ.

ಚಾರ್ಜ್​ಶೀಟ್‌ನಲ್ಲೇನಿದೆ..?

ತುಫೈಲ್ ಕೊಡಗು ಮೂಲದವನಾಗಿದ್ದು, ಪಿಎಫ್ಐ ಸರ್ವೀಸ್ ಟೀಂನ ಸಕ್ರಿಯ ಸದಸ್ಯನಾಗಿದ್ದು, ಮಾಸ್ಟರ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ ದಕ್ಷಿಣ ಕನ್ನಡದ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್​ನಲ್ಲಿ ಪಿಎಫ್ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ. ಕೊಲೆ ಆರೋಪಿಗಳಿಗೆ ಈತ ಮೈಸೂರು, ಕೊಡಗು ಹಾಗೂ ತಮಿಳುನಾಡಿನ ಈರೋಡಿನಲ್ಲಿ ಆಶ್ರಯ ನೀಡಿದ್ದ. ಮತ್ತೋರ್ವ ಆರೋಪಿ ಮೊಹಮ್ಮದ್ ಜಬೀರ್ ದಕ್ಷಿಣ ಕನ್ನಡ ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷನಾಗಿದ್ದು ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿ ನಡೆದಿದ್ದ ಸಭೆಗಳಲ್ಲಿ ಭಾಗಿಯಾಗಿದ್ದ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

- Advertisement -

Related news

error: Content is protected !!