Monday, April 29, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಪತ್ನಿ ಸರ್ಕಾರಿ ಕೆಲಸಕ್ಕೆ ಮರು ನೇಮಕ – ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -G L Acharya panikkar
- Advertisement -

ಸರ್ಕಾರ ಬದಲಾದ ಬೆನ್ನಲ್ಲೇ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಅವರಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಇದೀಗ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದರು.

https://twitter.com/siddaramaiah/status/1662478876453502976

ಇನ್ನು ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಟ್ವೀಟ್‌ ಮಾಡಿದ್ದಾರೆ.

- Advertisement -

Related news

error: Content is protected !!