Wednesday, September 9, 2026
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೆ ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ

- Advertisement -
- Advertisement -

ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೆ ನಾಲ್ವರ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಬಂಧಿತ ಓರ್ವ ಹಾಗೂ ತಲೆಮರೆಸಿಕೊಂಡಿರುವ, ನಿಷೇಧಿತ ಪಿಎಫ್‌ಐ ಸಂಘಟನೆಗೆ ಸೇರಿಸುವ ಮೂವರು ಸೇರಿ ಒಟ್ಟು ನಾಲ್ವರ ವಿರುದ್ಧ ೨ನೇ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಅಬ್ದುಲ್ ನಾಸೀರ್, ನೌಷದ್, ಅಬ್ದುಲ್ ರೆಹಮಾನ್ ಹಾಗೂ ಕಳೆದ ಜನವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ಅತೀಕ್ ಅಹಮ್ಮದ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಐಪಿಸಿ) ಹಾಗೂ ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆಯಡಿ (ಯುಎಪಿಎ) ವಿವಿಧ ಸೆಕ್ಷನ್‌ಗಳನ್ನು ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.ಎನ್‌ಐಎ ಸಲ್ಲಿಸಿದ ಚಾರ್ಜ್‌?ಶೀಟ್ನಲ್ಲಿ ಏನಿದೆ? : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿತರ ಸಂಖ್ಯೆ ೨೭ಕ್ಕೆ ಏರಿಕೆಯಾಗಿದೆ. ಈ ಪೈಕಿ ೨೧ ಮಂದಿಯನ್ನು ಬಂಧಿಸಲಾಗಿದ್ದು ಒಟ್ಟು ಆರು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಮತ್ತೋರ್ವ ಮೃತಪಟ್ಟಿದ್ದಾನೆ ಎಂದು ಎನ್‌ಐಎ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಾಪತ್ತೆಯಾಗಿರುವ ಅಬ್ದುಲ್ ನಾಸೀರ್, ನೌಷದ್ ಹಾಗೂ ರೆಹಮಾನ್ ಅವರು ಮೈಸೂರು, ಚಾಮರಾಜನಗರ ಹಾಗೂ ತಮಿಳುನಾಡಿನ ಈರೋಡ್ ಜಿಲ್ಲೆಗಳಲ್ಲಿ ಮುಖ್ಯ ಆರೋಪಿಗಳಿಗೆ ಆಶ್ರಯ ನೀಡಿದ್ದರು. ಅಲ್ಲದೆ, ತುಫೈಲ್ ಎಂಬ ಆರೋಪಿಗೆ ಬೆಂಗಳೂರಿನಲ್ಲಿ ಆಶ್ರಯ ಕೊಟ್ಟಿದ್ದರು ಎಂದು ಅಧಿಕಾರಿಗಳು ಚಾರ್ಜ್‌ ಶೀಟ್‌ನಲ್ಲಿ ತಿಳಿಸಿದ್ದಾರೆ.

೨೦೨೨ ಜುಲೈ ೨೬ರಂದು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆ ಅಕ್ಷಯ ಚಿಕನ್ ಸೆಂಟರ್‌ನಿಂದ ಮನೆಗೆ ಹೊರಡುತ್ತಿದ್ದ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಕೊಲೆ ಮಾಡಿದ್ದರು.ಈ ಸಂಬಂಧ ಆಗಸ್ಟ್‌ ೪ ರಂದು ಎನ್‌ಐಎ ತನಿಖೆ ಆರಂಭಿಸಿತ್ತು. ಹತ್ಯೆ ಬಳಿಕ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್‌ಗೆ ಪರಾರಿಯಾಗಲು, ಬಂಧಿತ ಅತೀಕ್ ಹಾಗೂ ಸದ್ಯ ಮೃತನಾಗಿರುವ ಕಲಂದ‌ರ್ ಚೆನ್ನೈನಲ್ಲಿ ೨೦೨೨ರಿಂದ ೨೦೨೩ರ ವರೆಗೆ ಆಶ್ರಯ ಒದಗಿಸಿದ್ದರು. ಅಲ್ಲದೆ, ನಾಪತ್ತೆಯಾಗಿರುವ ಅಬ್ದುಲ್ ರೆಹಮಾನ್ ವಿದೇಶಕ್ಕೆ ಪರಾರಿಯಾಗಲು ಹಾಗೂ ಮುಸ್ತಾಫ ಪೈಚಾರ್‌ಗೆ ಆಶ್ರಯ ಒದಗಿಸುವ ಬಗ್ಗೆ ಅತೀಕ್ ಹಾಗೂ ಕಲಂದರ್‌ಗೆ ರಿಯಾಜ್ ಎಂಬಾತ ಮಾರ್ಗದರ್ಶನ ನೀಡಿದ್ದ ಎಂದು ಚಾರ್ಜ್ ಶೀಟ್‌ನಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದು, ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!