- Advertisement -
- Advertisement -



ವಿಟ್ಲ: 2026-27ನೇ ಸಾಲಿನ ಆಯವ್ಯಯ ತಯಾರಿಕೆಗೆ ಪೂರ್ವಭಾವಿಯಾಗಿ ಚರ್ಚಿಸಲು ವಿಟ್ಲ ಪಟ್ಟಣ ಪಂಚಾಯತ್ ವತಿಯಿಂದ ಫೆಬ್ರವರಿ 19ರಂದು ಪೂರ್ವಾಹ್ನ 11.00 ಗಂಟೆಗೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಭೆ ಕರೆಯಲಾಗಿದೆ.
ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಪತ್ರಿಕಾ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ 2026-27ನೇ ಸಾಲಿನ ಬಜೆಟ್ ತಯಾರಿಕೆ ಕುರಿತಾಗಿ ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡುವಂತೆ ಪಂಚಾಯತ್ ಪ್ರಕಟಣೆಯಲ್ಲಿ ಕೋರಲಾಗಿದೆ
- Advertisement -








