Friday, April 26, 2024
spot_imgspot_img
spot_imgspot_img

ಮಂಗಳೂರು : ಪ್ರೇಕ್ಷಾ ನಿಗೂಢ ಸಾವಿನ ಹಿಂದಿದೆಯಾ ಡ್ರಗ್ಸ್ ಜಾಲದ ನಂಟು?

- Advertisement -G L Acharya panikkar
- Advertisement -

ಮಂಗಳೂರು : ಕುಂಪಲ ಆಶ್ರಯಕಾಲನಿ ನಿವಾಸಿ ವಿದ್ಯಾರ್ಥಿನಿ ಹಾಗೂ ಹವ್ಯಾಸಿ ಮಾಡೆಲ್ ಪ್ರೇಕ್ಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆಯಾಮದಲ್ಲೂ ತನಿಖೆ ಪ್ರಗತಿಯಲ್ಲಿದೆ. ಪ್ರೇಕ್ಷಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 20 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರಿಗೆ ಸ್ಥಳೀಯರು ನೀಡಿದ ಮಾಹಿತಿಯನ್ವಯ ಗುರುವಾರ ಮೂರು ಮಂದಿ ಯುವಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಮತ್ತಷ್ಟು ಮಾಹಿತಿ ಲಭಿಸಿದ್ದು, ಅದರನ್ವಯ ಶುಕ್ರವಾರ ಬೆಳ್ಳಂಬೆಳಗ್ಗೆ ಮತ್ತಷ್ಟು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರೇಕ್ಷಾ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಜಾ ವ್ಯಸನಿಗಳ ಮೇಲೆ ದೂರಿರುವ ಮೋಹನ್ ಶೆಟ್ಟಿ ಅವರ ಮನೆಗೆ ಗುರುವಾರ ತಡರಾತ್ರಿ ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ. ಪ್ರಕರಣ ಸಂಬಂಧ ಉಳ್ಳಾಲ ಪೊಲೀಸರು 13 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 11 ಮಂದಿ ಗಾಂಜಾ ಸೇವಿಸಿರುವ ವರದಿ ಪಾಸಿಟಿವ್ ಆಗಿದೆ.

ಇದಲ್ಲದೆ ‘ಮಗಳ ಅಂತಿಮ ಸಂಸ್ಕಾರದ ಸಂದರ್ಭದಲ್ಲೂ ಗಾಂಜಾ ಗ್ಯಾಂಗ್ ಬೆದರಿಕೆ ಒಡ್ಡಿತ್ತು. ಗಾಂಜಾ ವ್ಯಸನಿಗಳ ಕುರಿತು ಮಾತನಾಡದಂತೆ ಎಚ್ಚರಿಕೆಯನ್ನು ನೀಡಿದೆ. ಬಳಿಕ ಅಂಗಡಿಯವರಿಗೆ, ಸ್ಥಳೀಯರಿಗೆ ಜೀವ ಬೆದರಿಕೆಯನ್ನು ಒಡ್ಡಿದೆ. ಅವರಿಗೆ ಇಷ್ಟು ಕಿರುಕುಳ ನೀಡಿದವರು ಮಗಳಿಗೆ ಎಷ್ಟು ಕಿರುಕುಳ ನೀಡಿರಬಹುದು? ಅವರ ಮಾನಸಿಕ ಕಿರುಕುಳದಿಂದಲೇ ಬೇಸತ್ತು ಪ್ರೇಕ್ಷಾ ಸಾವನ್ನಪ್ಪಿದ್ದಾಳೆ’ ಎಂದು ಪ್ರೇಕ್ಷಾ ತಂದೆ ಚಿತ್ತಪ್ರಸಾದ್, ಸಚಿವ ಅಂಗಾರ ಅವರು ಸ್ಥಳಕ್ಕೆ ಭೇಟಿ ನೀಡಿದ ವೇಳೆ ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ ಪ್ರೇಕ್ಷಾಳ ಮೃತ ದೇಹದ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದೆ. ಆದರೆ ಆಕೆಯ ಮನೆಯ ಹಿಂಬದಿ ಬಾಗಿಲು ಮುರಿದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಈ ಬಾಗಿಲು ತೆರೆದವರು ಯಾರು ಎಂಬುದು ಇನ್ನು ತಿಳಿದು ಬಂದಿಲ್ಲ. ಇನ್ನೊಂದು ವರದಿ ತಿಂಗಳೊಳಗೆ ಬರಲಿದ್ದು ಅದು ಏನು ಹೇಳುತ್ತದೆ ಎಂದು ಕಾದುನೋಡಬೇಕಿದೆ.

ಇನ್ನಾದರೂ ಸ್ಥಳೀಯ ಪೊಲೀಸ್ ಇಲಾಖೆ ಇದರ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗಿದೆ ಯಾಕೆಂದರೆ ಈ ಪ್ರದೇಶದಲ್ಲಿ ಈ ಹಿಂದಿನಿಂದಲೂ ಡ್ರಗ್ಸ್ ಜಾಲದ ಬಗೆಗೆ ಸ್ಥಳೀಯರು ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಇದೇ ರೀತಿ ಮುಂದುವರಿದರೆ ಕರಾವಳಿ ಡ್ರಗ್ ಜಾಲದ ದಾಸರಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

- Advertisement -

Related news

error: Content is protected !!