Sunday, October 6, 2024
spot_imgspot_img
spot_imgspot_img

6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ರಾಷ್ಟ್ರಪತಿ

- Advertisement -
- Advertisement -

ನವದೆಹಲಿ: ಮೈಸೂರಿನ ಮಾಜಿ ಸಂಸದ ಸಿ.ಎಚ್‌. ವಿಜಯಶಂಕರ್ ಸೇರಿದಂತೆ 6 ಮಂದಿ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.

ಮೈಸೂರಿನ ಮಾಜಿ ಸಂಸದ ಸಿ.ಎಚ್‌. ವಿಜಯಶಂಕ‌ರ್ ಅವರನ್ನು ಮೇಘಾಲಯದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.

ಮಹಾರಾಷ್ಟ್ರದ ಮಾಜಿ ಸ್ಬಾಪೀಕರ್ ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಜಾರ್ಖಂಡ್‌ಗೆ ಹಾಗೂ ಬಿಜೆಪಿಯ ಹಿರಿಯ ನಾಯಕರಾದ ಒಪಿ ಮಾಥುರ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

ತ್ರಿಪುರಾ ಮಾಜಿ ಸಿಎಂ ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರನ್ನಾಗಿ, ರಮೆನ್ ದೇಕಾ ಅವರನ್ನು ಛತ್ತೀಸಗಢದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರವು ಮೂವರು ರಾಜ್ಯಪಾಲರನ್ನು ಬೇರೆ ರಾಜ್ಯಗಳಿಗೆ ವರ್ಗಾವಣೆಗೊಳಿಸಿದೆ.

- Advertisement -

Related news

error: Content is protected !!