Saturday, April 20, 2024
spot_imgspot_img
spot_imgspot_img

ಪ್ರಾಥಮಿಕ ಶಾಲೆಗಳ ಆರಂಭ ಸದ್ಯಕ್ಕೆ ಇಲ್ಲ; ಸಚಿವ ಸುಧಾಕರ್ ಸ್ಪಷ್ಟನೆ

- Advertisement -G L Acharya panikkar
- Advertisement -

ಬೆಂಗಳೂರು : ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ, ಕೇರಳದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಗಣೇಶ ಹಬ್ಬ ಕೂಡ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸದಿರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತು ಮಾತನಾಡಿರುವ ಸಚಿವ ಡಾ.ಸುಧಾಕರ್, ಸದ್ಯ 6-8ನೇ ತರಗತಿಗಳನ್ನು ಟ್ರಯಲ್ ಆಗಿ ಆರಂಭಿಸುತ್ತಿದ್ದೇವೆ. ಪ್ರಾಥಮಿಕ ಶಾಲೆಗಳಾದ 1ರಿಂದ 5ನೇ ತರಗತಿ ತೆರೆಯಲು ಪ್ರಸ್ತುತ ಚಿಂತನೆ ಇಲ್ಲ. ಸದ್ಯಕ್ಕೆ ಪ್ರಾಥಮಿಕ ಶಾಲೆ ತೆರೆಯುವುದು ಬೇಡ ಎಂದು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

6-8ನೇ ತರಗತಿವರೆಗೆ ಶಾಲೆ ಆರಂಭಕ್ಕೆ ಸೆ.6ರಿಂದ ನಿಯಮಾನುಸಾರ ಅವಕಾಶ ಕಲ್ಪಿಸಲು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ. ಕೋವಿಡ್ ಪಾಸಿಟಿವ್ ದರ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವೇ ಶಾಲೆಗಳನ್ನು ತೆರೆಯಲಾಗುವುದು ಎಂದರು.

- Advertisement -

Related news

error: Content is protected !!