Wednesday, July 22, 2026
spot_imgspot_img
spot_imgspot_img

ಮಂಗಳೂರಿನಲ್ಲಿ ಬಂದಿಳಿದ ಪ್ರಧಾನಿ ಮೋದಿಯವರಿಗೆ ಬಿಜೆಪಿ ನಾಯಕರಿಂದ ಅದ್ದೂರಿ ಸ್ವಾಗತ..!

- Advertisement -
- Advertisement -

ಸೇನಾ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ಮೋದಿ ಆಗಮನ..

ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆಆಗಮಿಸಿ ಅಲ್ಲಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು.

ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ ಭಾಗೀರಥಿ ಮುರುಳ್ಳ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು ಪ್ರಧಾನಿ ಮೋದಿಯವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು.

ಉಡುಪಿಯ ಸಿಟಿ ಬಸ್ ನಿಲ್ದಾಣ ರಸ್ತೆಗೆ ಆಗಮಿಸಿದ ಪ್ರಧಾನಿ ಮೋದಿ ಬಳಿಕ ಬೃಹತ್‌ ರೋಡ್‌ ಶೋ ನಲ್ಲಿ ಭಾಗವಹಿಸಿದರು. ಬಿಜೆಪಿ ಕಾರ್ಯಕರ್ತರು ಪುಷ್ಪಮಳೆ ಸುರಿಸಿ, ಹುಲಿ ವೇಷ ಕುಣಿತದ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು. ರಸ್ತೆಯ ಎರಡು ಬದಿಗಳಲ್ಲಿ ಜನಸಾಗರ ಹರಿದು ಬಂದಿದೆ.

- Advertisement -

Related news

error: Content is protected !!