Sunday, June 14, 2026
spot_imgspot_img
spot_imgspot_img

ವಿಮಾನ ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

- Advertisement -
- Advertisement -

ಮುಂಬೈ: ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆ ಪ್ರಧಾನಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿಂದ ಮೇಘನಿನಗರ ಪ್ರದೇಶದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ನೇರವಾಗಿ ಕಾರಿನಲ್ಲೇ ತೆರಳಿದರು. ಇಲ್ಲಿ ಅಧಿಕಾರಿಗಳ ಬಳಿ ಘಟನೆ ಬಗ್ಗೆ ಮಾಹಿತಿ ಪಡೆದ ಮೋದಿ ಬಳಿಕ ಅಹಮದಾಬಾದ್‌ನ ಸಾರ್ವಜನಿಕ ಆಸ್ಪತ್ರೆಗೆ ತೆರಳಿದರು. ಅಲ್ಲಿ ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಅಲ್ಲಿಂದ ಏರ್‌ಪೋರ್ಟ್‌ನತ್ತ ತೆರಳಿದರು.

ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ, ಇತರ ಭದ್ರತಾ ಅಧಿಕಾರಿಗಳು ಜೊತೆಗಿದ್ದರು.

ಜೂನ್ 12ರಂದು (ಗುರುವಾರ) ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.

- Advertisement -

Related news

error: Content is protected !!