Monday, July 22, 2024
spot_imgspot_img
spot_imgspot_img

ಟೀಂ ಇಂಡಿಯಾದ ನಾಯಕರ ಡ್ರೆಸ್ಸಿಂಗ್‌ ರೂಮ್‌ಗೆ ತೆರಳಿ ಅಪ್ಪಿಕೊಂಡು ಸಮಧಾನಿಸಿದ ಪ್ರಧಾನಿ ಮೋದಿ..

- Advertisement -G L Acharya panikkar
- Advertisement -

ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಡ್ರೆಸ್ಸಿಂಗ್‌ ರೂಮ್‌ಗೆ ತೆರಳಿ ಆಟಗಾರರಿಗೆ ಸಮಾಧಾನ ಹೇಳಿದ್ದಾರೆ. ಪ್ರಧಾನಿ ಡ್ರೆಸ್ಸಿಂಗ್‌ ರೂಮ್‌ಗೆ ಬಂದ ವಿಚಾರವನ್ನು ಬೌಲರ್‌ ಮೊಹಮ್ಮದ್‌ ಶಮಿ ಮತ್ತು ಆಲ್‌ರೌಂಡರ್‌ ರವೀಂದ್ರ ಜಡೇಜಾ ಪೋಸ್ಟ್‌ ಮಾಡಿ ತಿಳಿಸಿದ್ದಾರೆ.

ಶಮಿಯನ್ನು ಅಪ್ಪಿದ ಮೋದಿ ಸಮಾಧಾನ ಹೇಳಿದ್ದಾರೆ. ಈ ಬಗ್ಗೆ ಶಮಿ ತಮ್ಮ ಪೋಸ್ಟ್‌ನಲ್ಲಿ ’ದುರದೃಷ್ಟವಶಾತ್ ನಿನ್ನೆಯ ದಿನ ನಮ್ಮದಾಗಿರಲಿಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲಾ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ವಿಶೇಷವಾಗಿ ಡ್ರೆಸ್ಸಿಂಗ್ ಕೋಣೆಗೆ ಬಂದು ನಮ್ಮ ಉತ್ಸಾಹವನ್ನು ಹೆಚ್ಚಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ. ನಾವು ಮತ್ತೆ ಪುಟಿದೇಳುತ್ತೇವೆ ಎಂದು ತಮ್ಮ ಮನದಾಳದ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಜಡೇಜಾ ಅವರು ತಮ್ಮ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ’ಟೂರ್ನಿಯಲ್ಲಿ ನಾವು ಉತ್ತಮವಾಗಿ ಆಡಿದ್ದರೂ ನಿನ್ನೆ ನಾವು ಮುಗ್ಗರಿಸಿದ್ದೇವೆ. ಜನರು ಈಗಲೂ ನಮ್ಮನ್ನು ಬೆಂಬಲಿಸುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ನಮ್ಮ ಡ್ರೆಸ್ಸಿಂಗ್‌ ರೂಮ್‌ಗೆ ಭೇಟಿ ನೀಡಿದ್ದು ವಿಶೇಷ ಮತ್ತು ಪ್ರೇರಕವಾಗಿತ್ತು’ ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

- Advertisement -

Related news

error: Content is protected !!