- Advertisement -
- Advertisement -



ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಪ್ರಧಾನಿ ಮೋದಿ ಅವರು ಸಂಚರಿಸುವ ಮಾರ್ಗಗಳಲ್ಲಿ ಖಾಕಿ ಪಡೆ ಕಟ್ಟೆಚ್ಚರ ವಹಿಸಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಭದ್ರತೆ ಗಮನದಲ್ಲಿಟ್ಟುಕೊಂಡು ಸಂಚಾರಕ್ಕೆ ತಾತ್ಕಾಲಿಕ ಸಾರ್ವಜನಿಕರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.
- Advertisement -








