Monday, May 20, 2024
spot_imgspot_img
spot_imgspot_img

ಕರ್ನಾಟಕದಲ್ಲಿ ಸತತವಾಗಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆ: ಸಿಎಂ ಯಡಿಯೂರಪ್ಪನವ ರೊಂದಿಗೆ ಪ್ರಧಾನಿ ಮೋದಿ ಸಮಾಲೋಚನೆ

- Advertisement -G L Acharya panikkar
- Advertisement -

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಂಜಾಬ್​, ಕರ್ನಾಟಕ, ಬಿಹಾರ್ ಮತ್ತು ಉತ್ತಾರಖಂಡ್​ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ರಾಜ್ಯಗಳ ಕೊವಿಡ್​-19 ಸ್ಥಿತಿಗತಿಯನ್ನು ಚರ್ಚಿಸಿದರು.

ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಭೆಯಲ್ಲಿ ಪಂಜಾಬ್​ ಸಿಎಂ ಅಮರಿಂದರ್​ ಸಿಂಗ್​, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉತ್ತರಾಖಂಡ ಸಿಎಂ ತೀರಥ್​ ಸಿಂಗ್​ ರಾವತ್ ಪಾಲ್ಗೊಂಡಿದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿನ ಕೊರೊನಾ ಪರಿಸ್ಥಿತಿ, ನಿಯಂತ್ರಣಕ್ಕೆ ಸರ್ಕಾರಗಳು ಕೈಗೊಂಡ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಕ್ಷಿಪ್ತವಾಗಿ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯ ಸರ್ಕಾರಗಳು ಒಮ್ಮೆಲೇ ಲಾಕ್​ಡೌನ್​ ಹೇರಬಾರದು. ಲಾಕ್​ಡೌನ್​ ಹೇರದೆಯೇ ಕೊರೊನಾ ನಿಯಂತ್ರಿಸುವ ಪ್ರಯತ್ನ ಮಾಡಬೇಕು. ರಾಜ್ಯಸರ್ಕಾರಗಳು ಲಾಕ್​ಡೌನ್​ನ್ನು ಕೊನೇ ಅಸ್ತ್ರವನ್ನಾಗಿ ಪ್ರಯೋಗಿಸಬೇಕು ಎಂದು ಹೇಳಿದ್ದರು. ಆದರೆ ಕೆಲವು ರಾಜ್ಯಗಳಲ್ಲಿ ಲಾಕ್​ಡೌನ್​ ಅನಿವಾರ್ಯವಾಗಿದೆ.

ಅಷ್ಟಾದರೂ ಸೋಂಕು ಪ್ರಸರಣದ ಚೈನ್ ಬ್ರೇಕ್​ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಟ್ಟಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!