Sunday, June 29, 2025
spot_imgspot_img
spot_imgspot_img

ನೆಲ್ಯಾಡಿ: ನದಿಗೆ ಬಿದ್ದ ಖಾಸಗಿ ಬಸ್, ಚಾಲಕ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ನೆಲ್ಯಾಡಿ: ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಲಾವಂತ್ತಡ್ಕ ಎಂಬಲ್ಲಿ ನಡೆದಿದೆ.

ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಬಸ್‌ನ ಡ್ರೈವರ್‌ ಬಸ್‌ನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ಬೆಂಗಳೂರು ಮೂಲದವನೆಂದು ತಿಳಿದುಬಂದಿದೆ.

ಈ ಖಾಸಗಿ ಸ್ವೀಪರ್ ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಗೋಕರ್ಣದಿಂದ ಡ್ರೈವರ್ ಮತ್ತು ಸಹ-ಡ್ರೈವರ್ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!