Wednesday, May 15, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಇಬ್ಬರು ಮೃತ್ಯು

- Advertisement -G L Acharya panikkar
- Advertisement -

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಬ್ಯಾಡಗಿ ಬಳಿಯ ಮೊಟೇಬೆನ್ನೂರಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಮೃತ ಚಾಲಕನನ್ನು ಸದಾನಂದ (50) ಎಂದು ಗುರುತಿಸಲಾಗಿದೆ. ಅಲ್ಲದೇ ಓರ್ವ ಪ್ರಯಾಣಿಕ ಸಹ ಮೃತಪಟ್ಟಿದ್ದು, ಘಟನೆಯಲ್ಲಿ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ಬಸ್ ಬೆಂಗಳೂರಿನಿಂದ ಮೀರಜ್‍ಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ, ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!