Saturday, June 20, 2026
spot_imgspot_img
spot_imgspot_img

ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್‌; ಓರ್ವ ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ಬಸ್ಸಿಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್​ನಲ್ಲಿ ನಡೆದಿದೆ.

ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ತುಳಸಿ (15) ಮೃತ ವಿದ್ಯಾರ್ಥಿನಿ. ನಿವೇದಿತ (14) ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಓವರ್ ಸ್ಪೀಡ್‌ನಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಏಕಾಏಕಿ ರಸ್ತೆ ಬದಿ ನಿಂತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿಯಲ್ಲಿದ್ದ ಮರ ಹಾಗೂ ಮನೆಯ ಗೋಡೆಗೆ ಗುದ್ದಿದೆ. ಈ ಘಟನೆಯಲ್ಲಿ ರಸ್ತೆ ಬದಿಯಿದ್ದ ಮನೆಯ ಮುಂಭಾಗದ ಛಾವಣಿಯೂ ಸಂಪೂರ್ಣ ಜಖಂ ಆಗಿದೆ.

ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂ ಆಗಿದೆ. ಅತಿ ವೇಗವಾಗಿ ಬಸ್​ ಚಲಾಯಿಸಿಕೊಂಡು ಬಂದ ಚಾಲಕನ ವಿರುದ್ಧ ಕೋಪಗೊಂಡ ಸ್ಥಳೀಯರು ಬಸ್ಸಿನ ಮೇಲೆ ಕಲ್ಲು ತೂರಾಟ ಮಾಡಿ ಬಸ್‌ನ ಗಾಜು ಪುಡಿ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!