Friday, April 26, 2024
spot_imgspot_img
spot_imgspot_img

ಸರ್ಕಾರಿ ಆಸ್ಪತ್ರೆ ಬಲಪಡಿಸಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಮುಡಿಪುವಿನಲ್ಲಿ ಡಿವೈಎಫ್ಐನಿಂದ ಪ್ರತಿಭಟನೆ

- Advertisement -G L Acharya panikkar
- Advertisement -

ಮುಡಿಪು : ಸರಕಾರಿ ಆಸ್ಪತ್ರೆ ಬಲಪಡಿಸಲು, ಖಾಸಗೀ ಆಸ್ಪತ್ರೆ ‌ನಿಯಂತ್ರಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹಾಗು ಕೊರೋನಾ ಹೆಸರಲ್ಲಿ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಮತ್ತು ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಇಂದು ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ವತಿಯಿಂದ ಮುಡಿಪು ಜಂಕ್ಷನ್ ನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ , ಕಾರ್ಮಿಕ ಮುಖಂಡ ಸುನಿಲ್ ಕುಮಾರ್ ಬಜಾಲ್ ಹಾಗೂ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್ ಮಾತನಾಡಿದರು.

ಸಭೆಯಲ್ಲಿ ಡಿವೈಎಫ್ಐ ಜಿಲ್ಲಾ ಉಪಾಧ್ಯಕ್ಷ ರಫೀಕ್ ಹರೇಕಳ, ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಉಪಾಧ್ಯಕ್ಷ ರಝಾಕ್ ಮೊಂಟೆಪದವು , ಕೋಶಾಧಿಕಾರಿ ಅಶ್ರಫ್ ಹರೇಕಳ, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಅಧ್ಯಕ್ಷ ಅಲ್ತಾಫ್ ಮುಡಿಪು, ಕಾರ್ಯದರ್ಶಿ ಜಗದೀಶ್ ದೇರಳಕಟ್ಟೆ, , ಡಿವೈಎಫ್ಐ ಮುಡಿಪು ಘಟಕದ ಅಧ್ಯಕ್ಷ ರಝಾಕ್ ಮುಡಿಪು, ಕಾರ್ಯದರ್ಶಿ ರಿಯಾಜ್, ಬಾಳೆಪುಣಿ ಕೈರಂಗಳ ಘಟಕದ ಅಧ್ಯಕ್ಷ ಅಲಿ ಕಾಯಾರ್, ಕಾರ್ಯದರ್ಶಿ ಖಲಂದರ್, ದೇರಳಕಟ್ಟೆ ಘಟಕದ ಅಧ್ಯಕ್ಷ ನವಾಜ್ ಉರುಮಣೆ, ಕೊಲ್ಲರಕೋಡಿ ಘಟಕದ ಅಧ್ಯಕ್ಷ ಆಸಿಫ್ ಕೊಲ್ಲರಕೋಡಿ, ಮುಖಂಡರಾದ ಶರೀಫ್ ವಿದ್ಯಾನಗರ, ನಿಜಾರ್ ಮುಡಿಪು, ಶಾಫಿ ಮುಡಿಪು, ನಝೀರ್ ಟಿ ಉಪಸ್ಥಿತರಿದ್ದರು.

- Advertisement -

Related news

error: Content is protected !!